ಎಲ್ಲರಿಗೂ ನಮಸ್ಕಾರ, ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಬೇಕೆ..? HDFC Scholarship 2024 ವಿದ್ಯಾರ್ಥಿವೇತನಕ್ಕೆ ಯಾರು ಅರ್ಜಿ ಸಲ್ಲಿಸಬಹುದು..? ಅರ್ಜಿ ಸಲ್ಲಿಸಲು ಯಾವೇಲ್ಲಾ ದಾಖಲೆಗಳು ಬೇಕಾಗುತ್ತವೆ.? ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ ಗಮನಿಸಿ.
ಹಿಂದುಳಿದ ವರ್ಗಗಳಿಗೆ ಸೇರಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅವರ ವಿದ್ಯಾಭ್ಯಾಸಕ್ಕೆ ಹಣಕಾಸಿನ ನೇರವು ನೀಡಿ ಅವರು ಶಿಕ್ಷಣದಿಂದ ವಂಚಿತರಾದಂತೆ ತಡೆಯಲು ವಿದ್ಯಾರ್ಥಿಗಳಿಗೆ ಅವರ ವ್ಯಾಸಂಗಕ್ಕಾಗಿ 75,000 ರೂ. ವರೆಗೆ ಹಣದ ಸಹಾಯವನ್ನು ನೀಡುತ್ತಾರೆ. ವಿದ್ಯಾರ್ಥಿಗಳು ಈ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಿ ಇದರ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು.
HDFC ಬ್ಯಾಂಕ್ ECSS ಕಾರ್ಯಕ್ರಮದ ಅಡಿಯಲ್ಲಿ ವಿದ್ಯಾರ್ಥಿಗಳಿಗೆ ಪರಿವರ್ತನ್ ವಿದ್ಯಾರ್ಥಿವೇತನವನ್ನು ನೀಡುತ್ತಾರೆ. ECSS ಕಾರ್ಯಕ್ರಮದ ಅಡಿಯಲ್ಲಿ, ವೈಯಕ್ತಿಕ/ಕುಟುಂಬದ ಬಿಕ್ಕಟ್ಟುಗಳು ಅಥವಾ ಯಾವುದೇ ಇತರೆ ಹಣಕಾಸಿನ ಸಮಸ್ಯೆಗಳಿಂದಾಗಿ ತಮ್ಮ ಶಿಕ್ಷಣದ ವೆಚ್ಚವನ್ನು ಭರಿಸಲು ಸಾಧ್ಯವಾಗದೆ ಮತ್ತು ಶಾಲೆಯಿಂದ ಹೊರಗುಳಿಯುವ ವಿದ್ಯಾರ್ಥಿಗಳಿಗೆ ಹಣದ ಸಹಾಯವನ್ನು ನೀಡುವ ಗುರಿಯನ್ನು ಈ ವಿದ್ಯಾರ್ಥಿವೇತನ ಕಾರ್ಯಕ್ರಮ ಹೊಂದಿದೆ.
ಪ್ರಸ್ತುತ 1 ನೇ ತರಗತಿ ಯಿಂದ 12 ನೇ ತರಗತಿಯ ಶಾಲಾ ವಿದ್ಯಾರ್ಥಿಗಳು ಹಾಗೂ ಡಿಪ್ಲೊಮಾ, ITI, ಪಾಲಿಟೆಕ್ನಿಕ್, ಪದವಿ, ಮತ್ತು ಸ್ನಾತಕೋತ್ತರ ಪದವಿ (ಸಾಮಾನ್ಯ ಮತ್ತು ವೃತ್ತಿಪರ) ಕೊರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
HDFC Scholarship For PG Students 2024
ಅರ್ಜಿದಾರರು ಭಾರತದ ಮಾನ್ಯತೆ ಪಡೆದ ಕಾಲೇಜುಗಳು ಅಥವಾ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಪದವಿ ಕೋರ್ಸ್‌ಗಳಲ್ಲಿ (ಸಾಮಾನ್ಯ ಕೋರ್ಸ್‌ಗಳು – MCom, MA, ಇತ್ಯಾದಿ ಮತ್ತು ವೃತ್ತಿಪರ ಕೋರ್ಸ್‌ಗಳು – MTech, MBA, ಇತ್ಯಾದಿ) ಅಧ್ಯಯನ ಮಾಡುತ್ತರಬೇಕು.
ವಿದ್ಯಾರ್ಥಿವೇತನದ ಪ್ರಯೋಜನಗಳು:
ಸಾಮಾನ್ಯ ಸ್ನಾತಕೋತ್ತರ ಪದವಿ ಕೋರ್ಸ್‌ಗಳಿಗೆ: 35,000 ರೂ.
ವೃತ್ತಿಪರ ಸ್ನಾತಕೋತ್ತರ ಪದವಿ ಕೋರ್ಸ್‌ಗಳಿಗೆ: 75,000 ರೂ.
HDFC Scholarship Degree Students 2024:
ವಿದ್ಯಾರ್ಥಿಗಳು ಭಾರತದಲ್ಲಿನ ಮಾನ್ಯತೆ ಪಡೆದ ಕಾಲೇಜುಗಳು ಅಥವಾ ವಿಶ್ವವಿದ್ಯಾನಿಲಯಗಳಲ್ಲಿ ಪದವಿ ಕೋರ್ಸ್‌ಗಳನ್ನು (ಸಾಮಾನ್ಯ ಕೋರ್ಸ್‌ಗಳು- BCom, BSc, BA, BCA, ಇತ್ಯಾದಿ ಮತ್ತು ವೃತ್ತಿಪರ ಕೋರ್ಸ್‌ಗಳು- BTech, MBBS, LLB, B Arch, ನರ್ಸಿಂಗ್) ವ್ಯಾಸಂಗ ಮಾಡುತ್ತಿರಬೇಕು.
ಪದವಿ ಸ್ಕಾಲರ್ಶಿಪ್’ನ ಪ್ರಯೋಜನಗಳು:
ಸಾಮಾನ್ಯ ಪದವಿ ಪೂರ್ವ ಕೋರ್ಸ್‌ಗಳಿಗೆ: 30,000 ರೂ.
ವೃತ್ತಿಪರ ಪದವಿ ಪೂರ್ವ ಕೋರ್ಸ್‌ಗಳಿಗೆ: 50,000 ರೂ.
HDFC Parivartan Scholarship For School Students 2024:
ವಿದ್ಯಾರ್ಥಿಗಳು ಪ್ರಸ್ತುತ 1 ನೇ ತರಗತಿ ಯಿಂದ 12 ನೇ ತರಗತಿ, ಡಿಪ್ಲೊಮಾ, ಐಟಿಐ ಮತ್ತು ಪಾಲಿಟೆಕ್ನಿಕ್ ಕೋರ್ಸ್‌ಗಳಲ್ಲಿ ಖಾಸಗಿ, ಸರ್ಕಾರಿ ಅಥವಾ ಸರ್ಕಾರಿ ಅನುದಾನಿತ ಶಾಲೆಗಳಲ್ಲಿ ಅಧ್ಯಯನ ಮಾಡುತ್ತಿರಬೇಕು.
ವಿದ್ಯಾರ್ಥಿವೇತನದ ಪ್ರಯೋಜನಗಳು:
1 ರಿಂದ 6 ನೇ ತರಗತಿಗೆ ವಿದ್ಯಾರ್ಥಿಗಳಿಗೆ: 15,000 ರೂ.
7 ರಿಂದ 12 ನೇ ತರಗತಿ, ಡಿಪ್ಲೊಮಾ, ITI ಮತ್ತು ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ: 18,000 ರೂ.
ಅಗತ್ಯ ದಾಖಲೆಗಳು:
- ಪಾಸ್‌ಪೋರ್ಟ್ ಅಳತೆಯ ಪೋಟೋ
- ಹಿಂದಿನ ವರ್ಷದ ಅಂಕಪಟ್ಟಿಗಳು (2023-24)
- ಗುರುತಿನ ಪುರಾವೆ (ಆಧಾರ್ ಕಾರ್ಡ್/ವೋಟರ್ ಐಡಿ/ಚಾಲನಾ ಪರವಾನಗಿ)
- ಪ್ರಸ್ತುತ ವರ್ಷದ ಪ್ರವೇಶ ಪುರಾವೆ (ಶುಲ್ಕ ರಸೀದಿ/ಪ್ರವೇಶ ಪತ್ರ/ಸಂಸ್ಥೆಯ ಗುರುತಿನ ಚೀಟಿ/ಬೊನಾಫೈಡ್ ಪ್ರಮಾಣಪತ್ರ) (2023-24)
- ವಿದ್ಯಾರ್ಥಿಗಳ ಬ್ಯಾಂಕ್ ಪಾಸ್‌ಬುಕ್ ಅಥವಾ Canceled ಚೆಕ್
- ಆದಾಯ ಪುರಾವೆ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 31-12-2024
ಪ್ರಮುಖ ಲಿಂಕ್‌ಗಳು:
HDFC Parivartan Scholarship Application ಲಿಂಕ್: Apply ಮಾಡಿ
ಇತರೆ ಮಾಹಿತಿಗಳನ್ನು ಓದಿ:
New Ration Card: ಹೊಸ ರೇಷನ್ ಕಾರ್ಡ್‌ಗಾಗಿ ಆನ್‌ಲೈನ್ ಅರ್ಜಿ ಆಹ್ವಾನ