Krishi Bhagya Scheme: ಕೃಷಿ ಭಾಗ್ಯ ಯೋಜನೆಯಡಿ ಕೃಷಿ ಕಾರ್ಯಕ್ಕೆ ರೈತರಿಗೆ ಶೇ.90 ರಷ್ಟು ಸಹಾಯಧನ

Telegram Group Join Now
WhatsApp Group Join Now

ಎಲ್ಲರಿಗೂ ನಮಸ್ಕಾರ, ಕೃಷಿ ಭಾಗ್ಯ ಯೋಜನೆಗೆ ಅರ್ಜಿ ಸಲ್ಲಿಸಬೇಕೆ..? ಈ ಯೋಜನೆಗೆ ಯಾರು ಅರ್ಜಿ ಸಲ್ಲಿಸಲು ಅರ್ಹರು..? Krishi Bhagya Scheme 2024 ಗೆ ಅರ್ಜಿ ಸಲ್ಲಿಸಿದ ರೈತರಿಗೆ ಎಷ್ಷು ಸಹಾಯಧನ ದೊರೆಯಲಿದೆ..? ಹಾಗೂ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಲೇಖನದಲ್ಲಿ ಒದಗಿಸಲಾಗಿದೆ ಗಮನಿಸಿ.

ಮಳೆಯ ಆಶ್ರಿತ ಕೃಷಿಯನ್ನು ಸುಸ್ಥಿರ ಕೃಷಿಯನ್ನಾಗಿ ರೂಪಾಂತರಗೊಳಿಸುವ ನಿಟ್ಟಿನಲ್ಲಿ, ಸಮರ್ಪಕವಾಗಿ ಮಳೆ ನೀರಿನ ಸಂಗ್ರಹಣೆ ಹಾಗೂ ಉಪಯುಕ್ತ ಬಳಕೆ ಪದ್ಧತಿಯಿಂದ ಕೃಷಿ ಉತ್ಪಾದಕತೆಯನ್ನು ಉತ್ತಮ ಪಡಿಸಲು, ಹಾಗೂ ರೈತರ ಆದಾಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಹಾಗೂ ಮಳೆ ನೀರು ವ್ಯರ್ಥವಾಗದಂತೆ ಆಯ್ದ ಸ್ಥಳಗಳಲ್ಲಿ ಕೃಷಿ ಹೊಂಡ ತೆಗೆದು ನೀರು ಸಂಗ್ರಹಿಸಲಾಗುತ್ತದೆ.

ಕೃಷಿ ಭಾಗ್ಯ ಯೋಜನೆಯಡಿಯಲ್ಲಿ ಈ ಕೆಳಗಿನ ಸೌಲಭ್ಯಗಳು ದೊರೆಯಲಿದೆ

  • ಕ್ಷೇತ್ರ ಬದು ನಿರ್ಮಾಣ
  • ಕೃಷಿ ಹೊಂಡ
  • ನೀರು ಇಂಗದಂತೆ ತಡೆಯಲು ಪಾಲಿಥೀನ್ ಹೊದಿಕೆ
  • ಕೃಷಿ ಹೊಂಡದ ಸುತ್ತಲೂ ತಂತಿಬೇಲಿ
  • ಹೊಂಡದಿಂದ ನೀರು ಎತ್ತಲು ಡೀಸೆಲ್/ ಪೆಟ್ರೋಲ್/ ಸೋಲಾರ್ ಪಂಪ್‌ಸೆಟ್
  • ಸೂಕ್ಷ್ಮ (ತುಂತುರು/ ಹನಿ) ನೀರಾವರಿ ಘಟಕ

ಈ ಮೇಲಿನ ಎಲ್ಲ ಘಟಕಗಳ ಅನುಷ್ಠಾನಕ್ಕೆ ಸಾಮಾನ್ಯ ವರ್ಗದ ರೈತರಿಗೆ ಶೇಕಡಾ. 80 ರಷ್ಟು ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡದ ರೈತರಿಗೆ ಶೇಕಡಾ.90 ರಷ್ಟು ಸಹಾಯಧನ ನೀಡುತ್ತಾರೆ. ನೀವು ಕೂಡ ಅರ್ಜಿ ಸಲ್ಲಿಸಿ ಈ ಸೌಲಭ್ಯಗಳ ಲಾಭವನ್ನು ಪಡೆದುಕೊಳ್ಳಬಹುದು.

Krishi Bhagya Scheme ಅಗತ್ಯ ದಾಖಲೆಗಳು:

  • ಪಾಸ್‌ಪೋರ್ಟ್ ಅಳತೆಯ ಪೋಟೋ
  • ಪಹಣಿ/ಉತಾರ
  • ಜಾತಿ ಪ್ರಮಾಣ ಪತ್ರ
  • ಬ್ಯಾಂಕ್ ಪಾಸ್ ಬುಕ್ ಪ್ರತಿ

Krishi Bhagya Scheme ಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ರೈತರು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನಿಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರ ವನ್ನು ಸಂಪರ್ಕಿಸುವಂತೆ ಉಡುಪಿ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದ್ದಾರೆ.

ಇತರೆ ಮಾಹಿತಿಗಳನ್ನು ಓದಿ:

New Ration Card: ಹೊಸ ರೇಷನ್ ಕಾರ್ಡ್‌ಗಾಗಿ ಆನ್‌ಲೈನ್‌ ಅರ್ಜಿ ಆಹ್ವಾನ

PMKSY Scheme: ರೈತರಿಗೆ ಗುಡ್‌ ನ್ಯೂಸ್;‌ ಅರ್ಹ ರೈತರಿಗೆ ಸರ್ಕಾರದಿಂದ ಶೇ.90 ರಷ್ಟು ಸಹಾಯಧನ

ಬೆಳೆ ವಿಮೆ ಮಾಡಿಸಲು ಅರ್ಜಿ ಸಲ್ಲಿಕೆ ಆರಂಭ

ದನ, ಮೇಕೆ/ಕುರಿ, ಕೋಳಿ ಶೆಡ್ ನಿರ್ಮಾಣಕ್ಕೆ ಸಹಾಯಧನ

Leave a Comment

error: Don't Copy