ಎಲ್ಲರಿಗೂ ನಮಸ್ಕಾರ, ನೀವು ಕೂಡ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಗೆ ಅರ್ಜಿ ಸಲ್ಲಿಸಬೇಕೆ..? ಯಾರು PMKSY Scheme ಗೆ ಅರ್ಜಿ ಸಲ್ಲಿಸಬಹುದು..? ವಯೋಮಿತಿ ಎಷ್ಟು..? ಹಾಗೂ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ ಸೇರಿದಂತೆ ಹೆಚ್ಚಿನ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಿದ್ದೇವೆ ಓದಿರಿ.
ತೋಟಗಾರಿಕೆ ಇಲಾಖೆಯ ವತಿಯಿಂದ 2024-25 ನೇ ಸಾಲಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ (ಹನಿ ನೀರಾವರಿ) ಯೋಜನೆಯಡಿ (PMKSY Scheme) ಯಲ್ಲಿ ಅರ್ಹ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಹಾಗೂ ಇತರೆ ವರ್ಗದ ಅರ್ಹ ರೈತರಿಂದ ಅರ್ಜಿಯನ್ನು ಆಹ್ವಾನಿಸಿದೆ. ಆಸಕ್ತ ರೈತರು ಈ ಯೋಜನೆಯ ಲಾಭವನ್ನು ಪಡೆದುಕೊಳ್ಳಬಹುದು.
PMKSY Scheme 2024 Application:
ತೋಟಗಾರಿಕೆ ಬೆಳೆಯನ್ನು ಬೆಳೆಯುತ್ತಿರುವ ಎಲ್ಲಾ ವರ್ಗದ ರೈತರಿಗೆ (ಕಾಫಿ, ಟೀ ಹಾಗೂ ರಬ್ಬರ್ ಬೆಳೆಗಳನ್ನು ಹೊರತುಪಡಿಸಿ) ಹನಿ ನೀರಾವರಿ ಘಟಕ ಅಳವಡಿಸಿಕೊಂಡಿರುವ ಪ್ರತಿ ಫಲಾನುಭವಿಗೆ ಗರಿಷ್ಟ 5 ಹೆಕ್ಟೇರ್ ಪ್ರದೇಶದವರೆಗೆ ಹಾಗೂ ತರಕಾರಿ ಮತ್ತು ಹೂ ಬೆಳೆಗಳಿಗೆ ಗರಿಷ್ಟ 2 ಹೆಕ್ಟೇರ್ ಪ್ರದೇಶಕ್ಕೆ ಸಹಾಯಧನವನ್ನು ನೀಡುತ್ತಾರೆ.
SC, ST ರೈತರಿಗೆ 2 ಹೆಕ್ಟೇರ್ ಪ್ರದೇಶದವರೆಗೆ ಶೇ.90 ರಷ್ಟು ಸಹಾಯಧನ ಮತ್ತು ಇತರೆ ವರ್ಗದ ರೈತರಿಗೆ ಶೇ. 75 ರಷ್ಟು ಸಹಾಯಧನ ಹಾಗೂ 2 ಹೆಕ್ಟೇರ್ ರಿಂದ 5 ಹೆಕ್ಟೇರ್ ಪ್ರದೇಶದವರೆಗೆ ಶೇ. 45 ರಷ್ಟು ಸಹಾಯಧನವನ್ನು ಅರ್ಹ ರೈತರಿಗೆ ನೀಡುತ್ತಾರೆ.
ಕೇಂದ್ರ ಪುರಸ್ಕೃತ ರಾಷ್ಟ್ರೀಯ ಖಾದ್ಯ ತೈಲ ಅಭಿಯಾನದಲ್ಲಿ ತಾಳೆ ಬೆಳೆಯನ್ನು ಇಲಾಖಾ ಪಾಲುದಾರಿಕೆ ಕಂಪನಿಯಾದ ರುಚಿ ಸೋಯಾ ಇಂಡ್ಸ್ಸ್ಟ್ರೀಸ್ಸ್ ಅವರೊಂದಿಗೆ ಪಿಪಿಪಿ ಮಾದರಿಯಲ್ಲಿ ಅನುಷ್ಠಾನಗೊಳಿಸಲಾಗುತ್ತಿದ್ದು, ತಾಳೆ ಹೊಸ ಪ್ರದೇಶ ವಿಸ್ತರಣೆಗೆ 20,000 ರೂ. ಸಹಾಯಧನ ಹಾಗೂ ಮೊದಲ ನಾಲ್ಕು ವರ್ಷದ ಪಾಲನೆಗಾಗಿ 5,500 ರೂ. ರಂತೆ ಪ್ರತಿ ಹೇಕ್ಟರ್ ಗೆ ನೀಡುತ್ತಾರೆ.
ಡಿಸೇಲ್ ಪಂಪ್ ಸೆಟ್ ಖರೀದಿಗೆ, ಕಟಾವು ಯಂತ್ರ ಖರೀದಿಗೆ ಹಾಗೂ ಅಂತರ ಬೇಸಾಯ ಕೈಗೊಂಡಿದ್ದಲ್ಲಿ ಹೆಕ್ಟೇರ್ ಗೆ 5,000 ರೂ. ಸಹಾಯಧನ ನೀಡುತ್ತಾರೆ.
ರಾಷ್ಟ್ರೀಯ ತೋಟಗಾರಿಕೆ ಮಿಷನ್ ಉಪ ಯೋಜನೆಯಡಿಯಲ್ಲಿ ಪ್ರದೇಶ ವಿಸ್ತರಣೆ, ಕಿತ್ತಳೆ ಮತ್ತು ಕಾಳು ಮೆಣಸು ಪುನಶ್ಚೇತನ ಕಾರ್ಯಕ್ರಮ, ಸಮಗ್ರ ಕೀಟ ಮತ್ತು ರೋಗ ನಿರ್ವಹಣೆ ಹಾಗೂ ಪ್ರಾಥಮಿಕ ಸಂಸ್ಕರಣ ಘಟಕ ನಿರ್ಮಾಣಕ್ಕೆ ಸಹಾಯಧನ ನೀಡುತ್ತಾರೆ.
ಎಸ್ಎಂಎಎಂ ಯಾಂತ್ರೀಕರಣ ಯೋಜನೆಯಡಿಯಲ್ಲಿ ಇಲಾಖಾ ಮಾರ್ಗಸೂಚಿಯಂತೆ ಅನುಮೋದಿತ ಸಂಸ್ಥೆಯಿಂದ ಖರೀದಿಸಿದ ಮರ ಕತ್ತರಿಸುವ ಯಂತ್ರ, ಪವರ್ ಸ್ಟೇಯರ್, ಕಳೆಕೊಚ್ಚುವ ಯಂತ್ರ, ಏಣಿ, ತಳ್ಳುವ ಗಾಡಿ ಮುಂತಾದ ಯಂತ್ರೋಪಕರಣಗಳಿಗೆ ಶೇ.40/50 ರಷ್ಟು ಸಹಾಯಧನ ನೀಡುತ್ತಾರೆ.
ಅರ್ಜಿ ಸಲ್ಲಿಸಲು ಬಯಸುವ ರೈತರು ನಿಗಧಿತ ಅರ್ಜಿ ನಮೂನೆ, ಆಧಾರ್ ಕಾರ್ಡ್ ಹಾಗೂ ಇತರೆ ದಾಖಲಾತಿಗಳೊಂದಿಗೆ ಹತ್ತಿರದ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಕಚೇರಿಯಲ್ಲಿ ಡಿಸೆಂಬರ್ 31 ರ ಒಳಗಾಗಿ ಹೆಸರು ನೋಂದಾಯಿಸಿಕೊಳ್ಳಬಹುದು. ಸಹಾಯಧನವನ್ನು ನಿಗದಿಪಡಿಸಿ ಗುರಿಗೆ ಅನುಗುಣವಾಗಿ ಜೇಷ್ಠತಾ ಪಟ್ಟಿ ಆಧಾರದ ಮೇಲೆ ನೀಡುತ್ತಾರೆ.
ಇತರೆ ಮಾಹಿತಿಗಳನ್ನು ಓದಿ:
New Ration Card: ಹೊಸ ರೇಷನ್ ಕಾರ್ಡ್ಗಾಗಿ ಆನ್ಲೈನ್ ಅರ್ಜಿ ಆಹ್ವಾನ
MGNREGA Job Card: ನರೇಗಾ ಜಾಬ್ ಕಾರ್ಡ್ ಇದ್ದರೆ ಸಿಗಲಿವೇ ಈ ಪ್ರಯೋಜನಗಳು