ಎಲ್ಲರಿಗೂ ನಮಸ್ಕಾರ, ನೀವು ಇನ್ನು ಇ-ಖಾತಾ ಮಾಡಿಸಿಕೊಂಡಿಲ್ಲವೇ..? ಅರ್ಜಿ ಶುಲ್ಕ ಎಷ್ಟು..? ಎಲ್ಲಿ E-Khata Update ಮಾಡಿಸಿಕೊಳ್ಳಬೇಕು ಎಂದು ತಿಳಿದಿಲ್ಲವೇ..? ಹಾಗಿದ್ದರೇ ಚಿಂತೆ ಬಿಡಿ ಈ ಲೇಖನದಲ್ಲಿ ಮಾಹಿತಿಯನ್ನು ನೀಡಲಿದ್ದೇವೆ ಓದಿರಿ.
ಇ-ಖಾತಾ ಸಮಸ್ಯೆಯನ್ನು ಪರಿಹರಿಸಲು ಬಿಬಿಎಂಪಿ ಯು ಬೆಂಗಳೂರು ಒನ್ ಕೇಂದ್ರಗಳಲ್ಲಿ ಇ-ಖಾತಾ ಪಡೆದುಕೊಳ್ಳಲು ವ್ಯವಸ್ಥೆ ಮಾಡಿದೆ. BBMP ವ್ಯಾಪ್ತಿಯಲ್ಲಿ ಅಂತಿಮ ಇ-ಖಾತಾ ಅನ್ನು ಪಡೆಯಲು ಬೆಂಗಳೂರು ಒನ್ ಕೇಂದ್ರದ ಮೂಲಕ ಸಹಾಯವನ್ನು ಪಡೆಯಬಹುದು ಎಂದು BBMP ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಅವರು ತಿಳಿಸಿದ್ದಾರೆ.
E-Khata Update ಅರ್ಜಿ ಶುಲ್ಕ:
E-Khata ಮಾಡಿಸಿಕೊಳ್ಳಲು ಬೆಂಗಳೂರು ಒನ್ ಕೇಂದ್ರದಲ್ಲಿ 45 ರೂಪಾಯಿ. ಶುಲ್ಕ ಮತ್ತು ಪ್ರತಿ ದಾಖಲೆಯ ಪುಟಗಳ ಸ್ಕ್ಯಾನ್ ಮಾಡಲು 5 ರೂಪಾಯಿ ಗಳನ್ನು ಪಾವತಿಸಬೇಕು. ಹಾಗೂ BBMP 125 ರೂಪಾಯಿ. (ಅಂತಿಮ ಇ-ಖಾತಾ ಮುದ್ರಣಕ್ಕೆ ಸಿದ್ಧವಾದಾಗ ಮಾತ್ರ) ಪಾವತಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- ಆಸ್ತಿ ತೆರಿಗೆ ರಶೀದಿ
- ಮಾರಾಟ ಅಥವಾ ನೋಂದಾಯಿತ ಪತ್ರ
- ಮಾಲೀಕರ ಆಧಾರ್
- ಬೆಸ್ಕಾಂ ಬಿಲ್
- ಜಲಮಂಡಳಿ ಬಿಲ್ (ನೀವು ಕಾವೇರಿ ಸಂಪರ್ಕವನ್ನು ಹೊಂದಿದ್ದರೆ)
- BDA ಅಥವಾ ಯೋಜನಾ ಪ್ರಾಧಿಕಾರದಿಂದ ಲೇಔಟ್ ಅಥವಾ ಸೈಟ್ ಅನುಮೋದನೆ (ಇದರ ದಾಖಲೆ ಹೊಂದಿದ್ದರೆ)
- BBMP ಯಿಂದ ಕಟ್ಟಡ ಯೋಜನೆ ಅನುಮೋದನೆ(ಇದರ ದಾಖಲೆ ಹೊಂದಿದ್ದರೆ)
- ಡಿಸಿ ಪರಿವರ್ತನೆ (ಇದರ ದಾಖಲೆ ಹೊಂದಿದ್ದರೆ)
- ಬೆಂಗಳೂರು ಅಭಿವದ್ಧಿ ಪ್ರಾಧಿಕಾರ(ಬಿಡಿಎ) ಅಥವಾ ಕರ್ನಾಟಕ ಹೌಸಿಂಗ್ ಬೋರ್ಡ್ (ಕೆಎಚ್ಬಿ) ಅಥವಾ ಯಾವುದೇ ಸರ್ಕಾರಿ ಪ್ರಾಧಿಕಾರದಿಂದ ಹಂಚಿಕೆ ಪತ್ರ (ನೀವು ಇದರ ದಾಖಲೆ ಹೊಂದಿದ್ದರೆ)
ಈ ಮೇಲಿನ ಎಲ್ಲಾ ದಾಖಲೆಗಳ ಪ್ರತಿಯೊಂದಿಗೆ ನೀವು ಬೆಂಗಳೂರು ಒನ್ ಕೇಂದ್ರಕ್ಕೆ ಭೇಟಿ. ಆನ್’ಲೈನ್ ವಿವರಗಳನ್ನು ಸಲ್ಲಿಸಲು ಅವರಿಗೆ ತೋರಿಸಿ ಮತ್ತು ನಂತರ ಅವುಗಳನ್ನು ಹಿಂದಕ್ಕೆ ಪಡೆದುಕೊಳ್ಳಿ ಎಂದು ಅವರು ಹೇಳಿದ್ದಾರೆ.
BBMP ವ್ಯಾಪ್ತಿಯಲ್ಲಿ ಇ-ಖಾತಾ ಪಡೆಯಲು ಕನ್ನಡ ಮತ್ತು ಇಂಗ್ಲೀಷ್ ಭಾಷೆಯ ತರಬೇತಿ ವೀಡಿಯೋವನ್ನು ಯೂಟ್ಯೂಬ್ ನಲ್ಲಿ ಅಪ್ಲೋಡ್ ಮಾಡಲಾಗಿದ್ದು, ಅದನ್ನು ನೋಡಿಕೊಂಡು ಸ್ವತಃ ಸಾರ್ವಜನಿಕರೇ ಇ-ಖಾತಾಗೆ ಅರ್ಜಿ ಸಲ್ಲಿಸಬಹುದು.
ಇತರೆ ಮಾಹಿತಿಗಳನ್ನು ಓದಿ:
New Ration Card: ಹೊಸ ರೇಷನ್ ಕಾರ್ಡ್ಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನ