ಎಲ್ಲರಿಗೂ ನಮಸ್ಕಾರ, ನೀವು ಕೂಡ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಕಾಯುತ್ತಿದ್ದೀರಾ..? ಹಾಗಿದ್ದರೆ ಇಲ್ಲಿದೆ ನಿಮಗೆ ಗುಡ್ ನ್ಯೂಸ್, ಹೊಸ ರೇಷನ್ ಕಾರ್ಡ್ (New Ration Card) ಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹರು ಮತ್ತು ಆಸಕ್ತರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆಗೆ ಯಾವೇಲ್ಲ ದಾಖಲೆಗಳು ಬೇಕಾಗುತ್ತವೆ..? ಎಂಬ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಿದ್ದೇವೆ ಓದಿರಿ.
ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಲು ಈಗ ಮತ್ತೆ ಅವಕಾಶ ನೀಡಿದ್ದು, ಯಾರು ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿಸಲು ಕಾಯುತ್ತಿರುವವರು ಕೂಡಲೆ ಅಗತ್ಯ ದಾಖಲೆಗಳನ್ನು ನೀಡಿ ಅರ್ಜಿ ಸಲ್ಲಿಸಿ. ನೀವು ಕೂಡ ಈ ಯೋಜನೆಯ ಲಾಭವನ್ನು ಪಡೆದುಕೊಳ್ಳಬಹುದು.
New Ration Card Application 2024:
ರೇಷನ್ ಕಾರ್ಡ್ ಎಲ್ಲಾ ಪ್ರಮುಖ ದಾಖಲೆಗಳಲ್ಲಿ ಒಂದಾಗಿದೆ. ರೇಷನ್ ಕಾರ್ಡ್ ಹೊಂದಿರುವ ಫಲಾನುಭವಿಗಳಿಗೆ ಸರ್ಕಾರವು ನೀಡುತ್ತಿರುವ ಯೋಜನೆಗಳ ಲಾಭ ದೊರೆಯಲಿದೆ. ಬಡತನ ರೇಖೆಗಿಂತ ಕೆಳಗಿರುವವರಿಗೆ ಸರ್ಕಾರ ಪಡಿತರ ಚೀಟಿಯನ್ನು ನೀಡುತ್ತದೆ. ರೇಷನ್ ಕಾರ್ಡ್ ಹೊಂದಿರುವವರು ಪ್ರತಿ ತಿಂಗಳು ಉಚಿತವಾಗಿ ಪಡಿತರವನ್ನು ಪಡೆದುಕೊಳ್ಳಬಹುದು.
ಅರ್ಹ ಇ-ಶ್ರಮ ನೋಂದಾಹಿತ ಕಾರ್ಮಿಕರಿಗೆ ಆದ್ಯತಾ ಪಡಿತರ ಚೀಟಿ ವಿತರಣೆ ಕಾರ್ಯ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಆರಂಭವಾಗಿದೆ. ನೀವೆನಾದರು eShram Card ಕಾರ್ಮಿಕರಾಗಿದ್ದರೆ ಕೂಡಲೇ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿ.
ಅರ್ಹ ನೋಂದಾಯಿತ ಕಾರ್ಮಿಕರು ಆದ್ಯಾತಾ ಪಡಿತರ ಚೀಟಿ ಪಡೆಯಲು ನಿಮ್ಮ ಹತ್ತಿರದ ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯನ್ನು ಸಂಪರ್ಕಿಸಿ.
ಮುಂಜಾನೆ 10 ಗಂಟೆಯಿಂದ ಸಾಯಂಕಾಲ 5.30 ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಕೆಲವೊಮ್ಮೆ ಸಾಯಂಕಾಲ 5.30 ರ ನಂತರವು ಅರ್ಜಿ ಸಲ್ಲಿಕೆ ಲಿಂಕ್ ಕಾರ್ಯನಿರ್ವಹಿಸುತ್ತದೆ. ನಿಮ್ಮ ಹತ್ತಿರದ ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಸೇವಾ ಕೇಂದ್ರದಲ್ಲಿ ವಿಚಾರಿಸಿ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬಹುದು.
ಅರ್ಜಿದಾರರು ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 1800 425 9339 ಅಥವಾ ಸಹಾಯವಾಣಿ 1969ಕ್ಕೆ ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು. New Ration Card Website: Check It
ಇತರೆ ಮಾಹಿತಿಗಳನ್ನು ಓದಿ:
MGNREGA Job Card: ನರೇಗಾ ಜಾಬ್ ಕಾರ್ಡ್ ಇದ್ದರೆ ಸಿಗಲಿವೇ ಈ ಪ್ರಯೋಜನಗಳು